ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕದನದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಪ್ರಚಾರ ಮಾಡಲಾಯಿತು.

ಚನ್ನಪಟ್ಟಣದ ಕೋಟೆ ಬೀದಿಯಲ್ಲಿ ಬ್ರಾಹ್ಮಣರ ಮುಖಂಡರ ಮನೆಗೆ ಭೇಟಿ ನೀಡಿ ನಿಖಿಲ್ ಕುಮಾರಸ್ವಾಮಿ ಪರ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರ ನೇತೃತ್ವದಲ್ಲಿ ಕರಪತ್ರ ನೀಡಿ ಮತಯಾಚಿಸಲಾಯಿತು.

ಈ ವೇಳೆ ಡಿ.ಟಿ ಪ್ರಕಾಶ್ ಮಾತನಾಡಿ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗಾಗಿ ಹೆಚ್. ಡಿ ಕುಮಾರಸ್ವಾಮಿ ಅವರು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿದರು, ಶಂಕರ ಜಯಂತಿ ಆಚರಣೆ ಜಾರಿಗೆ ತಂದರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೆ ಸಂಘಟನಾ ಚಟುವಟಿಕೆಗಳಿಗಾಗಿ ನಿವೇಶನ ನೀಡಿದ್ದಾರೆ ಎಂದು ಸ್ಮರಿಸಿದರು.

ಹಾಗಾಗಿ ಈ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನ ಅತಿ ಹೆಚ್ಚು ಮತಗಳಿಂದ ಚುನಾಯಿಸ ಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯ ಎಂ ಡಿ ಪಾರ್ಥಸಾರಥಿ, ಚನ್ನಪಟ್ಟಣ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಾಘವೇಂದ್ರ ಮಯ್ಯ , ಚಂದ್ರಶೇಖರ್, ಕಡಕೋಳ ಜಗದೀಶ್, ಅಜಯ್ ಶಾಸ್ತ್ರಿ, ಮಧು ಹೆಗಡೆ, ವೆಂಕಟೇಶ್ ಮೂರ್ತಿ ಹಾಗೂ ಚನ್ನಪಟ್ಟಣ ಬ್ರಾಹ್ಮಣ ಮಹಾಸಭಾ ಮುಖಂಡರು ಹಾಜರಿದ್ದರು.