ಮೈಸೂರು: ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಕ್ರೀಡಾ ಮನೋಭಾವ, ಶಿಸ್ತು, ಆರೋಗ್ಯಕರ ಜೀವನಶೈಲಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.
ಮೈಸೂರಿನ ಕುವೆಂಪುನಗರದ ಪ್ಯಾಲೇಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ರಾಮಕೃಷ್ಣ ನಗರದ ಆಂದೋಲನ ವೃತ್ತದಲ್ಲಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ‘ಚಾಮುಂಡಿ ರನ್’ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತವಾಗದೆ ಕ್ರೀಡೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆ ದೈಹಿಕ ಆರೋಗ್ಯದ ಜತೆಗೆ ಆತ್ಮವಿಶ್ವಾಸ, ಶಿಸ್ತು, ಸಮಯಪಾಲನೆ,ಒಗ್ಗಟ್ಟಿನ ಮನೋಭಾವವನ್ನು ಬೆಳೆಸುತ್ತದೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಕಲಿಸಿಕೊಡುತ್ತದೆ ಎಂದು ಹೇಳಿದರು.
ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ಉತ್ಸಾಹ ಹಾಗೂ ಕ್ರೀಡಾಸಕ್ತಿಯನ್ನು ಕಂಡು ಸಂತಸವಾಯಿತು. ಇಂತಹ ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿವೆ ಎಂದು ಶಾಸಕರು ಹೇಳಿದರು.
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಅಗತ್ಯ ಪ್ರೋತ್ಸಾಹ ಮತ್ತು ಅವಕಾಶಗಳು ದೊರೆಯಬೇಕು. ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಕ್ರೀಡೆಯಲ್ಲಿ ಭಾಗವಹಿಸಲು ಉತ್ತೇಜಿಸಬೇಕು ಎಂದು ಕರೆ ನೀಡಿದರು.
ಬಳಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು.
ಚಾಮುಂಡಿ ರನ್ ಓಟಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ಯಾರಾ ಅಥ್ಲೀಟ್ ಹಾಗೂ ಕಾಮನ್ವೆಲ್ತ್ ಪದಕ ವಿಜೇತೆ ಕೆ.ಎಸ್. ಶಿಲ್ಪಾ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ಯಾಲೇಸ್ ಸ್ಪೋರ್ಟ್ಸ್ ಕ್ಲಬ್ ಪ್ರಮುಖರು ಹಾಗೂ ಸದಸ್ಯರು ಹಾಜರಿದ್ದರು.
ಆರೋಗ್ಯಕರ ಜೀವನಶೈಲಿಗೆ ಕ್ರೀಡಾಕೂಟ
ಸಹಕಾರಿ:ಜಿ.ಡಿ. ಹರೀಶ್ ಗೌಡ