ಮೈಸೂರು: ಮೈಸೂರಿನ ಅಗ್ರಹಾರ ವೃತ್ತದ ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯ
ಆರಂಭಿಸಿದ ನಗರ ಪಾಲಿಕೆ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಯಿತು.
ಮೈಸೂರಿನ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷರಾದ ಮಹೇಶ್ ಕುಮಾರ್ ಅವರು
ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯ ಮಾಡುವಂತೆ ಮನವಿ ಮಾಡಿದ್ದರು.
ಅವರ ಮನವಿಗೆ ಸ್ಪಂದಿಸಿ ಅಗ್ರಹಾರ ವೃತ್ತದಲ್ಲಿ ನ ಬಸ್ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯ ಆರಂಭಿಸಿದ ಮೈಸೂರು ಮಹಾ ನಗರ ಪಾಲಿಕೆಯ ಸಿಬ್ಬಂದಿಗಳಿಗೆ ಶುಕ್ರವಾರ ಮಹೇಶ್ ಕುಮಾರ್ ಅವರು ಸನ್ಮಾನಿಸಿ ಗೌರವಿಸಿದರು.
