ಮೈಸೂರು: ಇದೇ ಭಾನುವಾರ ಮೈಸೂರು ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ವಿಶ್ವ ಸುಗಮ ಸಂಗೀತ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ವತಿಯಿಂದ ಸುಗಮ ಸಂಗೀತ ಪಿತಾಮಹ ಪಿ. ಕಾಳಿಂಗರಾವ್ ಅವರ ಜನ್ಮದಿನೋತ್ಸವದ ಪ್ರಯುಕ್ತ ಆ.31 ಭಾನುವಾರ ಬೆಳಗ್ಗೆ 11ಘಂಟೆಗೆ ಮೈಸೂರು ದಸರಾ ವಸ್ತುಪ್ರದರ್ಶನದ ಪಿ.ಕಾಳಿಂಗರಾವ್ ಗಾನಮಂಟಪದಲ್ಲಿ ವಿಶ್ವ ಸುಗಮ ಸಂಗೀತ ದಿನಾಚರಣೆ ಆಚರಿಸಲಾಗುತ್ತಿದೆ,
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಸಿಇಒ ಕೆ.ರುದ್ರೇಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜ ವಿ ಭೈರಿ, ಕಸಾಪ ಮಾಜಿ ಅಧ್ಯಕ್ಷ ವೈಡಿ ರಾಜಣ್ಣ ಮತ್ತು ಚಂದ್ರಶೇಖರ್, ಹಿರಿಯ ಸಮಾಜ ಸೇವಕ ಕೆ. ರಘುರಾಂ ವಾಜಪೇಯಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಮಾಜಿ ನಗರಪಾಲಿಕೆ ಮಾಜಿ ಸದಸ್ಯ ರಘುರಾಜೇ ಅರಸ್, ಎಂ.ಕೆ ಅಶೋಕ್, ಕೆ.ವಿ ಮಲ್ಲೇಶ್, ನಿರೂಪಕ ಅಜಯ್ ಶಾಸ್ತ್ರಿ, ಮೈಸೂರು ಆರ್ಟಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ರಘುನಾಥ್, ಕಾರ್ಯದರ್ಶಿ ಗುರುದತ್, ಖಜಾಂಚಿ ರೋಷನ್ ಸೂರ್ಯ ಸೇರಿದಂತೆ ಮೈಸೂರಿನ ಕಲಾವಿದರು ಭಾಗವಹಿಸಲಿದ್ದಾರೆ.