ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿರುವಾಗಲೇ ಮತ್ತೊಂದು ಸಾವಿನ ಪ್ರಕರಣ ನಡೆದಿದೆ.
ಸರ್ಕಾರ ಸುಗ್ರೀವಾಜ್ಞೆ ತರುವ ಮುನ್ನವೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು
ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾದ ಘಟನೆ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೆಚ್ ಡಿ ಕೋಟೆ ತಾಲೂಕಿನ
ಕಣಿಯನಹುಂಡಿ ಗ್ರಾಮದ
ಜಯರಾಮು( 55) ಸಾವನ್ನಪ್ಪಿರುವ ರೈತ.
ಇಕ್ವಿಟಾಸ್, ಜನಬ್ಯಾಂಕ್ ಮೈಕ್ರೋ ಫೈನಾನ್ಸ್ ನಲ್ಲಿ ರೈತ ಜಯರಾಮು ಸುಮಾರು 5 ಲಕ್ಷ ಸಾಲ ಪಡೆದಿದ್ದರು.ಜಯರಾಮು ಇಬ್ಬರು ಹೆಣ್ಣು ಮಕ್ಕಳನ್ನ ಮದುವೆ ಮಾಡಿದ್ದು, ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದರು.
ಇತ್ತೀಚೆಗೆ ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗಿದ್ದು, ಸಾಲ ತೀರಿಸಲಾಗದೆ ಜಮೀನಿನಲ್ಲಿ ವಿಷ ಸೇವಿಸಿ ಜಯರಾಮು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.