ಚಾಲಕನಿಗೆ ಹಾರ್ಟ್‌ ಅಟ್ಯಾಕ್;ಅಡ್ಡಾ ದಿಡ್ಡಿ ಚಲಿಸಿದ ಬಸ್-‌ಚಾಲಕ,ಮಹಿಳೆ ಸಾವು

Spread the love

ಮೈಸೂರು,ಏ.3: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಮಹಿಳೆ ಮತ್ತು ಚಾಲಕ ಇಬ್ಬರೂ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.

ದಮ್ಮನಕಟ್ಟೆ ಬಳಿ ನಡೆದಿದೆ.
ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್, ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆ ಕಡೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹಠಾತ್ ಹೃದಯಾಘಾತವಾಗಿ ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಣೆ ತಪ್ಪಿ ಮಲಗಿದ್ದಾರೆ,ಆಗ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ನುಗ್ಗಿದೆ,ಈ ವೇಳೆ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ.ಚಸಲಕನೂ ಮೃತಪಟ್ಟಿದ್ದಾರೆ.

ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇಬ್ಬರ ಮೃತದೇಹಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದ್ದಾರೆ.

ಘಟನೆ ಬಗ್ಗೆ ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.