ಕಂಪ್ಯೂಟರ್ ಇಂಜಿನಿಯರಿಂಗ್ ಎಂ.ಟೆಕ್ ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ಪಡೆದ ಅಕ್ಷರ

Spread the love

ಮೈಸೂರು: ಮೈಸೂರಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿ.ವಿ.ಯ ೭ ನೇ ಘಟಿಕೋತ್ಸವದಲ್ಲಿ‌ ಕಂಪ್ಯೂಟರ್ ಇಂಜಿನಿಯರಿಂಗ್ ಎಂ.ಟೆಕ್ ವಿಭಾಗದ ವಿದ್ಯಾರ್ಥಿನಿ ಅಕ್ಷರ ಆರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಅಕ್ಷರ ಆರ್. ಕಂಪ್ಯೂಟರ್ ಇಂಜಿನಿಯರಿಂಗ್ ಎಂ.ಟೆಕ್ ವಿಭಾಗದ ವಿದ್ಯಾರ್ಥಿನಿ.ಅವರು ಎಂ.ಟೆಕ್.ವಿಭಾಗದಲ್ಲಿ ಪ್ರಥಮ ರ್‍ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಈಕೆ ನಂಜನಗೂಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ.ಕೆ ಮಾಲತಿ ಮತ್ತು ರಾಮಕೃಷ್ಣ ಅವರ ಪುತ್ರಿ.