ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು ಫಲಿತಾಂಶ ತೃಪ್ತಿ ತಂದಿದೆ ಎಂದು ಮೈಸೂರಿನ ಮಹರ್ಷಿ
ಪದವಿ ಪೂರ್ವ ಕಾಲೇಜಿನ ಸಿಇಒ ತೇಜಸ್ ಶಂಕರ್ ತಿಳಿಸಿದರು.
ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು ನಾವು ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದರ ಪಲವಾಗಿ ಉತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.
ನಗರದಲ್ಲಿ ಸುಮಾರು 22 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆ ಮಾಡುತ್ತಿರುವ ಮಹರ್ಷಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಾಣಿಜ್ಯ ವಿಭಾಗದ ನಿರಂಜನ್ ಬಿ ವಿ 592, ಸಂಪ್ರೀತಾ ಆರ್ 567, ಶ್ರೇಯ ಕೃಷ್ಣ ಕೆ 561, ಹಿಮಾಂಶು 558 ಅಂಕಗಳನ್ನು ಗಳಿಸಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಾಂಕ್ ಗಳನ್ನು ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ದೀಕ್ಷಿತ ಎಚ್538, ಪದ್ಮಾವತಿ523 ಅಂಕ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದರು.