ಮೈಕ್ರೋ ಫೈನಾನ್ಸ್ ಹಾವಳಿ, ಕ್ರಮಕ್ಕೆ ಹೇಮಾ ನಂದೀಶ್ ಆಗ್ರಹ

Spread the love

ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ಮಿತಿಮೀರಿದ್ದು,ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಹೇಮಾನಂದೀಶ್ ಒತ್ತಾಯಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ವಸೂಲಾತಿ ದೌರ್ಜನ್ಯದಿಂದ ಸಾಲಗಾರ ಬಡವರು ತತ್ತರಿಸಿದ್ದಾರೆ. ಆ‌ರ್ ಬಿಐ ನಿಯಮಗಳನ್ನು ಗಾಳಿಗೆ ತೂರಿ ಮೀಟರ್ ಬಡ್ಡಿ ದಂಧೆಕೋರರಂತೆ ಮೈಕ್ರೋ ಫೈನಾನ್ಸ್‌ ಜಾಲ ಸಾಲಗಾರರ ಪ್ರಾಣ ಹಿಂಡಿ ವಸೂಲಾತಿಗೆ ನಿಂತಿರುವುದು ಸರಿಯಲ್ಲ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಮರ್ಯಾದೆಗೆ ಅಂಜಿ ಗ್ರಾಮೀಣ ಪ್ರದೇಶದ ಬಡವರು ಮನೆ ತೊರೆದು ಹೋಗುತ್ತಿದ್ದಾರೆ. ಇವರ ರಕ್ಷಣೆಗೆ ಸರಕಾರ ಜರೂರು ಕ್ರಮ ಕೈಗೊಳ್ಳಬೇಕಿದೆ. ನಿಯಮ ಉಲ್ಲಂಘಿಸುವ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದು ಹೇಮಾ ನಂದೀಶ್ ಆಗ್ರಹಿಸಿದ್ದಾರೆ.