ಮೈಸೂರು: ವಿಶ್ವ ಪರಿಸರ ದಿನಾಚರಣೆಯನ್ನು ಇಲವಾಲದಲ್ಲಿ ಪಿ ಜಿಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದ ತಾಯಂದಿರ ಸಮ್ಮುಖದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಇಲವಾಲ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರ್ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮನೆಗೊಂದು ಗಿಡ ಊರಿಗೊಂದು ವನ ಎಂಬಂತೆ ಪ್ರತಿಯೊಬ್ಬರೂ ಗಿಡ ನೆಡುವ ಮೂಲಕ ಪರಿಸರವನ್ನ ಕಾಪಾಡಿಕೊಳ್ಳಬೇಕಾದುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿಯ ಅಧ್ಯಕ್ಷ ಯಾದವ್ ಹರೀಶ್, ಚಿರಜೀವ ಸೇವಾ ಟ್ರಸ್ಟ್ ಅಧ್ಯಕ್ಷ ರಕ್ತದಾನಿ ಮಂಜು, ಇಲವಾಲ ಗ್ರಾಮದ ದೇವರ ಅರ್ಚಕರು ಆಶ್ರಮದ ತಾಯಂದಿರು ಹಾಜರಿದ್ದರು.
