ಮೈಸೂರು: ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರೌಡಿ ಆಸಾಮಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಲಾಯಿತು.

ಮೈಸೂರು ನಗರದಲ್ಲಿ ರೌಡಿ ಆಸಾಮಿಗಳ ಮೇಲೆ ನಿಗಾ ವಹಿಸಲು ಹಾಗೂ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಸಂಬಂಧ ಮೈಸೂರು ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಮೈಸೂರು ನಗರ ಪೊಲೀಸರು 61 ರೌಡಿ ಆಸಾಮಿಗಳ ಮನೆಗಳ ಮೇಲೆ ದಿಢೀರ್ ದಾಳಿ ಮಾಡಿ ವಿಶೇಷ ತಪಾಸಣೆ ಮಾಡಿದರು.

ರೌಡಿ ಆಸಾಮಿಗಳಿಗೆ ಹೆಬ್ಬಾಳು ಪೊಲೀಸ್ ಠಾಣಾ ಆವರಣದಲ್ಲಿ ರೌಡಿ ಪರೇಡ್ ನಡೆಸಲಾಯುತು.
ಯಾವುದೇ ರೀತಿಯ ರೌಡಿ ಚಟುವಟಿಕೆಗಳು ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಕಡಕ್ ಎಚ್ಚರಿಕೆ ನೀಡಲಾಯಿತು.

ಯಾವುದೇ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾದಲ್ಲಿ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದರು.

ಮೈಸೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ನೇತೃತ್ವದಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಮತ್ತು ನಗರದ ಎಸಿಪಿ ಗಳು, ಅಧಿಕಾರಿಗಳು ಮತ್ತು ಸಿಬ್ಬಂದಿ ಈ ವಿಶೇಷ ತಪಾಸಣೆ ಹಾಗೂ ರೌಡಿ ಪರೇಡ್ ಕಾರ್ಯದಲ್ಲಿ ಪಾಲ್ಗೊಂಡಿದ್ದರು.