ಮೈಸೂರು: ನಾಡಹಬ್ಬ ದಸರಾ-2026 ಅಂಗವಾಗಿ ಸೆಸ್ಕ್ ವತಿಯಿಂದ ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅ.17, 18, 20 ಮತ್ತು 21ರಂದು ಬೃಹತ್ ಡ್ರೋನ್ ಪ್ರದರ್ಶನ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ತಮ್ಮ ಡ್ರೋನ್ ಹಾರಿಸಿ ಪ್ರದರ್ಶನದ ದೃಶ್ಯಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರೆ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ.
ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಖಾಸಗಿ ಡ್ರೋನ್ ಹಾರಿಸಿ ಚಿತ್ರೀಕರಣ ಮಾಡುವುದು ಕಂಡುಬಂದಲ್ಲಿ ಡ್ರೋನ್ ವಶಕ್ಕೆ ಪಡೆದು ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೆಸ್ಕ್ ಅಧಿಕಾರಿಗಳು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
