ಮೈಸೂರು: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ಮೈಸೂರಿನ ಅಜಯ್ ಪೃಥ್ವಿರಾಜ್ ಎಂ.ಎಲ್ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆದ್ದು ಕೀರ್ತಿ ತಂದಿದ್ದಾರೆ.
ವರ್ಲ್ಡ್ ಕಿಡ್ಸ್ ಅಥ್ಲೆಟಿಕ್ಸ್ ಡೇ ಅಂಗವಾಗಿ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಅಜಯ್ ಅತಿ ಕಡಿಮೆ ಅವಧಿಯಲ್ಲಿ ಗುರಿ ತಲುಪಿ ಜಯಗಳಿಸಿದ.
ಅಜಯ್ ಪೃಥ್ವಿರಾಜ್ ಮೈಸೂರಿನ ಐಡಿಯಲ್ ಜಾವಾ ರೋಟರಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈಗಾಗಲೇ ಹಲವಾರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಹುಮಾನಗಳ ಗಳಿಸಿದಿದ್ದಾನೆ.
ಅಜಯ್ ಮೈಸೂರಿನ ಗಾಯತ್ರಿಪುರಂ ನಿವಾಸಿ ಎಂ. ಲಿಂಗರಾಜು ಹಾಗೂ ಸಂಗೀತ ದಂಪತಿಯ ಪುತ್ರ,
