ನೀರನ್ನು ಮಿತವಾಗಿ ಬಳಸಿ: ಎಸ್ ಪ್ರಕಾಶ್ ಪ್ರಿಯಾದರ್ಶನ್

Spread the love

ಮೈಸೂರು: ವಿಶ್ವಾದ್ಯಂತ ಸುಮಾರು 200 ಕೋಟಿ ಮಂದಿಗೆ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ಜೆಡಿಎಸ್ ಕಾರ್ಯಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್ ವಿಷಾದಿಸಿದರು.

ಮೈಸೂರಿನ ಎಂ.ಜಿ. ರಸ್ತೆಯಲ್ಲಿರುವ ಜೆ.ಎಸ್.ಎಸ್. ಸಂಸ್ಥೆಯವರ ಸಾಹುಕಾರ್ ಸಿದ್ದಲಿಂಗಯ್ಯನವರ ಸಂಸ್ಕೃತ, ವೇದ,ಜ್ಯೋತಿಷ್ಯ ಪಾಠಶಾಲೆಯ ವಿದ್ಯಾರ್ಥಿ ನಿಲಯದಲ್ಲಿ ವಿಶ್ವ ಜಲ ದಿನ ಅಂಗವಾಗಿ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ಸೇವಾ ಕಾರ್ಯಕ್ರಮದಲ್ಲಿ ನೀರಿನ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿ ಹಣ್ಣು, ಹಂಪಲು, ದಿನಸಿ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿರು

ಒಂದು ಕೆಜಿ ಅಕ್ಕಿ ಬೆಳೆಯಲು 2,500 ಲೀಟ‌ರ್ ನೀರು ವೆಚ್ಚವಾಗುತ್ತದೆ. ನಮ್ಮ ಒಂದು ಹೊತ್ತಿನ ಊಟದ ಹಿಂದೆ ಸರಾಸರಿ 750 ಲೀಟರ್‌ಗಳಷ್ಟು ನೀರು ಬಳಕೆಯಾಗಿರುತ್ತದೆ. ನಿತ್ಯದ ಕೆಲಸಗಳಿಗೆ ಮಿತವಾಗಿ, ಸುಸ್ಥಿರವಾಗಿ ನೀರನ್ನು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಮಹೇಶ್, ಮೋಹನ್ ಹಾಗೂ ಸಿಬ್ಬಂದಿ ವರ್ಗ, ರಾಷ್ಟ್ರ, ರಾಜ್ಯ,ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಪದ್ಮಾವತಿ, ಛಾಯಾ,ಗಾಯಕ ಯಶ್ವಂತ್ ಕುಮಾರ್, ಹಿರಿಯ ಕ್ರೀಡಾಪಟು ಮಹದೇವ್, ವೀರಭದ್ರ ಸ್ವಾಮಿ,ರಾಜೇಶ್ ಕುಮಾರ್, ಮಹೇಶ್, ಶ್ರೀಧರ್, ಬಿಜೆಪಿ ಮುಖಂಡ ಪುರುಷೋತ್ತಮ್ ,ದತ್ತ,ಕೀರ್ತನ,ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.