ಮೈಸೂರು: ಮೈಸೂರಿನ ಸರಸ್ವತಿಪುರಂ
ಜೆಎಸ್ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಆಯೋಜಿಸಿ,ಮಕ್ಕಳಿಗೆ ವ್ಯಾಪಾರ,
ವ್ಯವಹಾರಗಳ ಬಗ್ಗೆ ತಿಳುವಳಿಕೆ ಬರುವಂತೆ ಮಾಡಲಾಯಿತು.
ಈ ವೇಳೆ ಸಂಸ್ಥೆಯ ಎಲ್ಲಾ ಮುಖ್ಯಸ್ಥರುಗಳಾದ ಗುರುಸ್ವಾಮಿ ಎಂ, ಶಿವಮೂರ್ತಿ,ಕವಿತ ಡಿ. ಆರ್. ಮತ್ತು ಸರ್ವಮಂಗಳ ಅವರುಗಳು ಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಕ್ಕಳ ಸಂತೆ ಉದ್ಘಾಟನೆ ಮಾಡಲಾಯಿತು.
ಮಕ್ಕಳಲ್ಲಿ ವ್ಯವಹಾರಿಕ ಜ್ಞಾನ, ವ್ಯಾಪಾರ ಕೌಶಲ್ಯತೆ ಮತ್ತು ಪಠ್ಯ ಚಟುವಟಿಕೆಗಳ ಜೊತೆಗೆ ಮಕ್ಕಳು ಸಂತೋಷವಾಗಿ ಕಲಿಯುವಂತೆ ಪ್ರೇರೇಪಿಸಲು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದು, ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
