ಮೈಸೂರಿಗೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ

Spread the love

ಮೈಸೂರು: ಕಾರ್ಯನಿಮಿತ್ತ ಮೈಸೂರಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಸ್ಥಳೀಯ ನಾಯಕರು ಅಭಿನಂದಿಸಿದರು.

ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಬರಮಾಡಿಕೊಂಡು ಹೂ ಹಾರ ಹಾಕಿ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕೆಪಿಸಿಸಿ ಸದಸ್ಯ ನಜರ್ ಬಾದ್ ನಟರಾಜ್, ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಶಿವಣ್ಣ, ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್, ಕಾರ್ಮಿಕ ವಿಭಾಗದ ಫ್ರಾನ್ಸಿಸ್ ಹಾಗೂ ನಾಗವಾಲ ಮಹೇಶ್ ಉಪಸ್ಥಿತರಿದ್ದರು.