ಮೈಸೂರು: ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಮೈಸೂರು ನಗರದ ಶಾಂತಿ ನಗರದಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಅಲ್ಲಿ ಹಾಜರಿದ್ದ ರೋಗಿಗಳೊಂದಿಗೆ ಹಾಗೂ ಅವರ ಸಂಬಂಧಿಕರೊಂದಿಗೆ ಆಸ್ಪತ್ರೆಯ ಸೇವೆಯ ಬಗ್ಗೆ ಚರ್ಚೆ ನಡೆಸಿದರು.
ಎರಡು ದಿನಗಳ ಹಿಂದೆ ಕಂಡುಬಂದಿದ್ದ ಕಾಲರಾ ಬಗ್ಗೆ ಹಾಗೂ ಕುಡಿಯುವ ನೀರಿನ
ಕಾರಣದಿಂದ ಉಂಟಾಗಿದ್ದ
ವಾಂತಿ-ಭೇದಿ ಪ್ರಕರಣಗಳ ಬಗ್ಗೆ ಶನಿವಾರ ಪರಿಶೀಲನೆ ನಡೆಸಿ ಹಾಜರಿದ್ದ ವೈದ್ಯರಿಂದ ವಿವರಣೆ ಪಡೆದು ಸೂಕ್ತ ಮಾರ್ಗದರ್ಶನ ನೀಡಿದರು.

ಮೈಸೂರು ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸಬಾರದು ಆ ರೀತಿಯಲ್ಲಿ ಮುಂಜಾಗ್ರತೆಯನ್ನು ವಹಿಸಬೇಕು ಎಂದು ಸೂಚಿಸಿದರು.
ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶೀಘ್ರದಲ್ಲೇ ವೈದ್ಯಕೀಯ ತಪಾಸಣೆ ನಡೆಸಿ ಅವರ ಆರೋಗ್ಯ ಸುಧಾರಿಸುವಲ್ಲಿ ಕ್ರಮ ವಹಿಸಬೇಕೆಂದು ಆದೇಶಿಸಿದರು.
ಶುದ್ಧಕುಡಿಯುವ ನೀರಿನ
ಬಗ್ಗೆ ಸಮಸ್ಯೆ ಕಂಡುಬಂದರೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳನ್ನು ಭೇಟಿಮಾಡಿ ಸಮಸ್ಯೆ ಬಗೆಹರಿಸಿ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ವೆಂಕಟೇಶ್ ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
