ಮೈಸೂರು: ಸಿದ್ದಲಿಂಗಪುರ ಸೇರಿದಂತೆ
ಮೈಸೂರಿನಾದ್ಯಂತ ಸುಬ್ರಮಣ್ಯ ಷಷ್ಠಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಬಹುತೇಕ ಎಲ್ಲ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಯಿತು.

ಮೈಸೂರಿನ ಸಿದ್ದಲಿಂಗಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿ ದೇವಾಲಯದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಜ ವಿಶೇಷ ಪೂಜೆ ನೆರವೇರಿಸಲಾಯಿತು.
ಮೈಸೂರು-ಬೆಂಗಳೂರು ಮುಖ್ಯ ರಸ್ತೆಯ ಸಿದ್ದಲಿಂಗಪುರ ಗ್ರಾಮದ ಬಳಿಯಿರುವ ಶ್ರೀ ಸುಬ್ರಹ್ಮಣ್ಯೇಶ್ವರಸ್ವಾಮಿಯ ದೇಗುಲ. ಸುಮಾರು 250 ವರ್ಷಗಳ ಇತಿಹಾಸ ಹೊಂದಿರುವ ದೇವಾಲಯ.
ಷಷ್ಠಿ ಪ್ರಯುಕ್ತ ಇಂದು ಮೂಲ ದೇವರಿಗೆ
ಮೈಸೂರು ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ಉಡುಗೊರೆಯಾಗಿ ನೀಡಿರುವ ಬೆಳ್ಳಿಯ ನಾಗಾಭರಣ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಸುಬ್ರಹ್ಮಣ್ಯಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ,ವಿವಿಧ ಬಗೆಯ ಹೂಗಳಿಂದ ಸ್ವಾಮಿಗೆ ಅಲಂಕಾರ ಮಾಡಲಾಗಿತ್ತು.

ನಾಲ್ಕು ವರ್ಷಗಳ ಬಳಿಕ ಇಂದು ಮೂಲ ದೇವರ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ದೇಗುಲಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದು ಪುನೀತರಾದರು ಎಂದು
ಸುಬ್ರಹ್ಮಣ್ಯೇಶ್ವರಸ್ವಾಮಿ ದೇಗುಲದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ತಿಳಿಸಿದ್ದಾರೆ.