ನಂಜನಗೂಡು,: ನಂಜನಗೂಡಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.
ಮುಖ್ಯ ಭಾಷಣಕಾರರಾಗಿ ಕನ್ನಡ ಉಪನ್ಯಾಸಕರಾದ ಡಾ. ಕೆ. ಮಾಲತಿ ಅವರು ಕನ್ನಡ ಭಾಷೆಯ ಇತಿಹಾಸ, ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಪರಂಪರೆಯ ಮಹತ್ವದ ಕುರಿತು ವಿವರಿಸಿದರು.
ಕನ್ನಡ ಭಾಷೆಯು ಸಾವಿರಾರು ವರ್ಷಗಳ ಇತಿಹಾಸ ಮತ್ತು ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಹೊಂದಿದೆ. ಪಂಪ, ರನ್ನ, ಜನ್ನ, ಬಸವಣ್ಣ, ಕುವೆಂಪು, ಬೇಂದ್ರೆ ಸೇರಿದಂತೆ ಅನೇಕ ಮಹಾನ್ ಸಾಹಿತಿಗಳು ತಮ್ಮ ಸಾಹಿತ್ಯದ ಮೂಲಕ ಕನ್ನಡ ಭಾಷೆಯ ಹಿರಿಮೆಯನ್ನು ವಿಶ್ವದಾದ್ಯಂತ ಪಸರಿಸಿದ್ದಾರೆ. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.
ಭೌತಶಾಸ್ತ್ರದ ಉಪನ್ಯಾಸಕರಾದ ಎಂ ಎಸ್ ರಾಮಾನುಜ ಅವರು ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನದ ಆಚರಣೆಯಾಗದೆ, ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಮತ್ತು ಬಳಕೆಗೆ ಪ್ರತಿಯೊಬ್ಬರೂ ಸಂಕಲ್ಪ ಮಾಡುವ ದಿನವಾಗಬೇಕು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ದೈನಂದಿನ ಜೀವನದಲ್ಲಿ ಕನ್ನಡಕ್ಕೆ ಆದ್ಯತೆ ನೀಡುವುದರ ಜೊತೆಗೆ ಇತರ ಭಾಷೆಗಳನ್ನೂ ಗೌರವಿಸಬೇಕು. ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ ಹಾಗೂ ಮಹನೀಯರ ಆದರ್ಶಗಳನ್ನು ಅರಿತುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ. ಆರ್. ದಿನೇಶ್ ಅವರು ಮಾತನಾಡಿ, ಕನ್ನಡ ಭಾಷೆ ನಮ್ಮ ಅಸ್ಮಿತೆ, ನಮ್ಮ ಸಂಸ್ಕೃತಿಯ ಪ್ರತೀಕ ಹಾಗೂ ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಬೆಳೆಸುವುದು ಶಿಕ್ಷಣ ಸಂಸ್ಥೆಗಳ ಪ್ರಮುಖ ಕರ್ತವ್ಯವಾಗಿದೆ. ಕನ್ನಡವನ್ನು ಪ್ರೀತಿಸುವುದರ ಜೊತೆಗೆ ಅದರ ಸಾಹಿತ್ಯ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಕನ್ನಡ ಗೀತೆಗಳನ್ನು ಉಪನ್ಯಾಸಕಿ ಎಂ.ಬಿ ಪದ್ಮಾವತಿ ಅವರು ಸುಶ್ರವ್ಯವಾಗಿ ಹಾಡಿ ರಂಜಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಉಪನ್ಯಾಸಕರಾದ ಲಿಂಗಣ್ಣಸ್ವಾಮಿ, ರಂಗಸ್ವಾಮಿ,ಸ್ವಾಮಿ ಗೌಡ ,ಮಾಲತಿ ,ಭವ್ಯ ,ಮೀನಾ ,ಆದಿಲ್ ಹುಸೇನ್, ರೂಪ ,ಸುಮಿತ್ರ ,ಟಿ ಕೆ ರವಿ, ನಾಗರಾಜ್ ರೆಡ್ಡಿ, ರಾಮಾನುಜ, ದಿನೇಶ್, ಹರೀಶ್, ವತ್ಸಲ ,ಪದ್ಮಾವತಿ ,ಅಂಬಿಕಾ, ಮಹದೇವಸ್ವಾಮಿ, ನಿಂಗಯ್ಯ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
