ನಂಜನಗೂಡು: ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹೊಸ ಶೈಕ್ಷಣಿಕ ವರ್ಷದ ಕಾಲೇಜು ಪ್ರಾರಂಭೋತ್ಸವವನ್ನು ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಬರಮಾಡಿ ಕೊಳ್ಳಲಾಯಿತ.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಮಹತ್ವದ ಹಂತವಾಗಿದೆ. ಶಿಸ್ತು, ಪರಿಶ್ರಮ ಹಾಗೂ ಗುರಿ,ನಿಷ್ಠೆಯಿಂದ ವಿದ್ಯಾಭ್ಯಾಸ ಮಾಡಿದರೆ ಉತ್ತಮ ಭವಿಷ್ಯ ನಿರ್ಮಾಣ ಸಾಧ್ಯ ಎಂದು ತಿಳಿಹೇಳಿ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಹಿರಿಯ ಉಪನ್ಯಾಸಕರಾದ ಎಸ್. ಲಿಂಗಣ್ಣಸ್ವಾಮಿ ಅವರು ಹೊಸ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ನಿಯಮಗಳು ಹಾಗೂ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಜೂನ್ ಒಂದ ರಂದು ನಡೆಯುವ ಪೋಷಕರ ಮಹಾಸಭೆಗೆ ವಿದ್ಯಾರ್ಥಿಗಳು ಎಲ್ಲಾ ಪೋಷಕರು ಭಾಗವಹಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
