ನಾಗ್ಪುರ ಹಿಂಸಾಚಾರ: ಹಾನಿಯ ವೆಚ್ಚ ಗಲಭೆಕೋರರಿಂದಲೇ ವಸೂಲಿ-ಫಡ್ನವಿಸ್

Spread the love

ನಾಗ್ಪುರ: ನಾಗ್ಪುರ ಹಿಂಸಾಚಾರದಲ್ಲಿ ಉಂಟಾದ ಹಾನಿಯ ವೆಚ್ಚವನ್ನು ಗಲಭೆಕೋರರಿಂದಲೇ ವಸೂಲು ಮಾಡಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು,ವೆಚ್ಚ ಪಾವತಿಸಲು ವಿಫಲವಾದಲ್ಲಿ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಮಾರಾಟ ಮಾಡುತ್ತೇವೆ ಎಂದು ತಿಳಿಸಿದರು.

ಘಟನೆಯ ಕುರಿತಾದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೊಗಳು ಮತ್ತು ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ಈವರೆಗೆ 104 ಗಲಭೆಕೋರರನ್ನು ಗುರುತಿಸಲಾಗಿದೆ. 12 ಅಪ್ರಾಪ್ತ ವಯಸ್ಕರು ಸೇರಿದಂತೆ 92 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂಸಾಚಾರದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ಮಾಡಿದ ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗಲಭೆಕೋರರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವವರೆಗೆ ನಮ್ಮ ಸರ್ಕಾರ ವಿರಮಿಸುವುದಿಲ್ಲ ಎಂದು ಫಡ್ನವೀಸ್ ಎಚ್ಚರಿಸಿದರು.