ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಮತ್ತು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ನಂಜನಗೂಡು ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಏ. 9ರಂದು ನಡೆಯುವ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ 2ನೇ ಹಂತದ ಪೂರ್ವಭಾವಿ ಸಭೆ ನಡೆಸಿದ ಶಾಸಕರು ಸಿದ್ದತೆ ಕುರಿತು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ್, ತಹಸೀಲ್ದಾರ್ ಶಿವಕುಮಾರ್ ಕಾಸನೂರ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ನಗರಸಭೆ ಪೌರಯುಕ್ತ ವಿಜಯ್, ಎ ಎಸ್ ಪಿ ಮಲ್ಲೇಶ್, ಇ ಒ ಜಗದೀಶ್, ಡಿವೈಎಸ್ಪಿ ರಘು ಸೇರಿದಂತೆ ವಿವಿಧ ಗ್ರಾಮದ ಯಜಮಾನರು, ಮುಖಂಡರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.