ಕೊಳ್ಳೇಗಾಲ: ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಆರ್.ನಂಜುಂಡಯ್ಯ ಅವರು 2025 ನೇ ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನವದೆಹಲಿ ಆಶ್ರಮ್, ಜರೋಡಾದ ಮಾಡೆಲ್ ಟೌನ್ ನಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ 41ನೇ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ:ಎಸ್.ಪಿ.ಸುಮನಾಸ್ಕರ್ ಅವರು
ಆರ್.ನಂಜುಂಡಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಯಳಂದೂರು ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಆರ್.ನಂಜುಂಡಯ್ಯ ಅವರು ಕಳೆದ ಮೂರು ದಿನಗಳ ಹಿಂದಷ್ಟೇ ಕೊಳ್ಳೇಗಾಲ, ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿ ಕೊಂಡಿದ್ದಾರೆ.
ಸಮಾಜ ಸೇವೆ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸುವವರನ್ನು ಗುರುತಿಸಿ ಕೊಡಮಾಡುವ ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿಯನ್ನು ಆರ್.ನಂಜುಂಡಯ್ಯನವರಿಗೆ ಕೇಂದ್ರ ಸಚಿವರು ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಎಸ್.ಪಿ. ಸುಮನಾಸ್ಕರ್, ಹಾಗೂ ಕೇಂದ್ರ ಸಚಿವರು, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ಪದಾಧಿಕಾರಿಗಳು ಸದಸ್ಯರು ಗಣ್ಯರು ಭಾಗವಹಿಸಿದ್ದರು.
ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಆರ್.ನಂಜುಂಡಯ್ಯ