ಮೈಸೂರು: ರಾಜ್ಯದ ಅತಿದೊಡ್ಡ ಹಬ್ಬ ನವರಾತ್ರಿ, ಇದು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.

ಜನಮನ ವೇದಿಕೆ ಹಾಗೂ ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ನೇತೃತ್ವದಲ್ಲಿ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ದಸರಾ ಪ್ರಯುಕ್ತ ಅಕ್ಟೋಬರ್ 5 ಮತ್ತು 6 ಚಿತ್ರ ಬಿಡಿಸುವ ಸ್ಪರ್ಧೆ, ಪೌರಕಾರ್ಮಿಕರಿಗೆ ಆಟೋಟ ಸ್ಪರ್ಧೆ, ವಿಶೇಷ ಮಕ್ಕಳಿಗೆ ಆಟೋಟ ಸ್ಪರ್ಧೆ, ಹಾಗೂ ಮಹಿಳೆಯರು ಹಾಗೂ ಮಕ್ಕಳಿಗೆ, ಪುರುಷರಿಗೆ ಆಟೋಟ ಸ್ಪರ್ಧೆ ಹಾಗೂ ಮನೆಮನೆ ಗೊಂಬೆ ಕುರಿಸುವ ಸ್ಪರ್ಧೆ ಆಯೋಜಿಸಿದ್ದು ಇವುಗಳಿಗೆ ಶಾಸಕ ಟಿ ಎಸ್ ಶ್ರೀವತ್ಸ ಚಾಲನೆ ನೀಡಿ ಮಾತನಾಡಿದರು.
ನಮ್ಮದು ಸಾಂಸ್ಕೃತಿಕ ಶ್ರೀಮಂತ ದೇಶವಾಗಿರುವುದರಿಂದ ಇಡೀ ವಿಶ್ವವೇ ಭಾರತವನ್ನು ಅನುಕರಿಸುತ್ತಿದೆ,
ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಪ್ರತಿ ವರ್ಷ ದಸರಾ ಉತ್ಸವ ಆಚರಿಸಿಕೊಂಡು ಬರಲಾಗಿದೆ. ಹಬ್ಬ, ಉತ್ಸವಗಳು ಜನರಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದವನ್ನು ತರುತ್ತವೆ ಎಂದು ಹೇಳಿದರು.
ಮನೆಮನೆ ದಸರಾದಲ್ಲಿ ನೂರಕ್ಕೂ ಹೆಚ್ಚು ಪುರುಷರು, ಮಹಿಳೆಯರು ,ಮಕ್ಕಳು
ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್, ಬಿಜೆಪಿ ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷರಾದ ಗೋಪಾಲರಾಜ ಅರಸ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಸೋಮೇಶ್, ಹರೀಶ್ ಮತ್ತಿತರರು ಹಾಜರಿದ್ದರು.

