ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ವಿಧಾನಪರಿಷತ್ ಸದಸ್ಯ ತಿಮ್ಮಯ್ಯ ವಿರುದ್ಧ ಅವಾಚ್ಯ ಪದಗಳಿಂದ ಮಾನಹಾನಿ ಮಾಡಿದ ಪ್ರಸನ್ನ ಎಂಬಾತನ ವಿರುದ್ಧ ನಜರ್ಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇವರಾಜ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದೂರು ಸಲ್ಲಿಸಲಾಗಿದ್ದು, ಕೂಡಲೇ ತನಿಖೆ ನಡೆಸಿ ಆ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಪದೇಪದೇ ಮುಖ್ಯಮಂತ್ರಿಯನ್ನು ನಿಂದಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದನ್ನು ಪೋಲಿಸ್ ಇಲಾಖೆ ತಡೆಗಟ್ಟಲು ಮುಂದಾಗ ಬೇಕೆಂದು ದೇವರಾಜ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದೇವರಾಜ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮೋಹನ್ ಕುಮಾರ್, ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್,ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಕಾಂಗ್ರೆಸ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಕಾಂಗ್ರೆಸ್ ಮುಖಂಡರುಗಳಾದ ದೀಪಕ್,ಪುಟ್ಟಸ್ವಾಮಿ, ರವಿಚಂದ್ರ,ಶ್ರೀಕಾಂತ್, ಪಾಂಡು, ಕಿರಣ್ ಮತ್ತಿತರ ಕಮುಖಂಡರು ಹಾಜರಿದ್ದರು.