ಉಡುಪಿ: ಸಾಮರಸ್ಯ ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟ ಕಟಪಾಡಿ ಉಡುಪಿ ಜಿಲ್ಲೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸರ್ವಕಲ ಸೇವಾ ಟ್ರಸ್ಟ್ ಅಧ್ಯಕ್ಷರಾದ ರಕ್ತದಾನಿ ನೀಮಾ ಲೋಬೊ ಅವರನ್ನು ಸನ್ಮಾನಿಸಲಾಯಿತು.
ನೀಮಾ ಲೋಬೊ ಅವರು ಕೃಷಿ,ರಕ್ತದಾನ, ಸಂಗೀತ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದನ್ನು ಗುರುತಿಸಿ
ಸಾಮರಸ್ಯ ನವೋದಯ ಸ್ವಸಹಾಯ ಗುಂಪುಗಳ ಒಕ್ಕೂಟದ ವತಿಯಿಂದ
ಸನ್ಮಾನಿಸಿ,ಗೌರವಿಸಲಾಯಿತು.
ಈ ವೇಳೆ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು.
