ನೆಲಂಮಗಲ: ಮನೆಗಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 343 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ನೆಲಮಂಗಲ ಪಟ್ಟಣಕ್ಕೆ ಸಮೀಪದ ವಾಜರಹಳ್ಳಿ ಜಾರ್ಜ್ ಲೇಔಟ್ ನಲ್ಲಿನ ಇಂಜಿನಿಯರ್ ಮನೆಯಲ್ಲಿ 56 ಲಕ್ಷ ಬೆಲೆ ಬಾಳುವ ಚಿನ್ನಾಭರಣ ದೋಚಿ ಖತರ್ನಾಕ್ ಕಳ್ಳರು ಪರಾರಿಯಾಗಿದ್ದರು.
ಅರ್ಧ ಕೆಜಿಗೂ ಹೆಚ್ಚು ಚಿನ್ನಾಭರಣವನ್ನು ಕಳ್ಳತನ ಮಾಡಿದ್ದರು.ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದ
ನೆಲಮಂಗಲ ಪಟ್ಟಣ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಯಂತ್ @ ಬ್ಯಾಟರಿ ಜಯಂತ ಹಾಗೂ ಯತೀಶ್ ಬಂಧಿತ ಆರೋಪಿಗಳು,ಆರೋಪಿಗಳಿಂದ 343 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇಬ್ಬರೂ ಆರೋಪಿಗಳು ನಟೋರಿಯಸ್ ಕಳ್ಳರಾಗಿದ್ದು ಈ ಹಿಂದೆ 25-26 ಕೇಸ್ ಗಳಲ್ಲಿ ಭಾಗಿಯಾಗಿದ್ದಾರೆಂಬುದು ವಿಚಾರಣೆ ವೇಳೆ ಗೊತ್ತಾಗಿದೆ