ಬೆಂಗಳೂರು: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಂದು ಬಲಿ ಪಡೆದಿದೆ.
ಬೆಂಗಳೂರಿನ,ನೆಲಮಂಗಲ,ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಅಪಘಾತ ಸಂಭವಿಸಿ ಯುವತಿ ಮೃತಪಟ್ಟಿದ್ದಾರೆ.
ಪ್ರಿಯಾಂಕಾ(26) ಮೃತಪಟ್ಟ ದುರ್ದೈವಿ. ಪ್ರಿಯಾಂಕಾ ಅವರು ಅಣ್ಣನೊಂದಿಗೆ ಬೈಕ್‌ನಲ್ಲಿ ಮಾದಾವರ ಕಡೆಗೆ ತೆರಳುತ್ತಿದ್ದರು.
ಈ ವೇಳೆ ಹದಗೆಟ್ಟಿದ್ದ ಎಪಿಎಮ್‌ಸಿ ರಸ್ತೆಯಲ್ಲಿ ದೊಡ್ಡ ಗುಂಡಿಯನ್ನು ತಪ್ಪಿಸಲು ಪ್ರಿಯಾಂಕ ಅವರ ಅಣ್ಣ ಮುಂದಾದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಉರುಳಿದೆ.
ಆಗ ಪ್ರಿಯಾಂಕಾ ರಸ್ತೆಗೆ ಬಿದ್ದಿದ್ದಾರೆ. ಆಗ ಕ್ಯಾಂಟರ್ ಲಾರಿಯ ಚಕ್ರದ ಕೆಳಗೆ ಸಿಲುಕಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಿಯಾಂಕಾ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

