ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.
ಪ್ರತಿಭಟನಾಕಾರರ ಕ್ರೌರ್ಯಕ್ಕೆ ಹೆದರಿ ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಓಲಿ ಈಗಾಗಲೇ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ.
ನೇಪಾಳ ಸಂಸತ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ.
ಈ ವೇಳೆ ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಬೆಂಕಿ ಹಚ್ಚಲಾಗಿದ್ದು,ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತವಾಗಿ ಸುಟ್ಟುಹೋಗಿದ್ದಾರೆ.
ಈ ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಆತಂಕ ಹೆಚ್ಚಾಗಿದೆ.