ಕೊಪ್ಪಳ: ಹಿಂದಿನಿಂದ ಬಂದ ಲಾರಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಸೇತುವೆಯಿಂದ ಟ್ರ್ಯಾಕ್ಟರ್ ಕಮರಿಗೆ ಉರುಳಿದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ
ಕೊಪ್ಪಳ-ವಿಜಯನಗರ ಗಡಿ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಕೂಡ್ಲಿಗಿ ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಾದ ಕೆಂಚಪ್ಪ (45), ಮಹಾಂತೇಶ್ (18), ಭರತ್ (1), ಗೌರಮ್ಮ (42), ಹುಲಿಗೇಠ (22), ಮತ್ತು ಮಾನ್ಯಮ್ಮ (39)ಮೃತಪಟ್ಟ ದುರ್ದೈವಿಗಳು.
ಅಪಘಾತದಲ್ಲಿ ಹತ್ತು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ವೇಗವಾಗಿ ಬಂದ ಲಾರಿ ಹಿಂದಿನಿಂದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಸಮತೋಲನ ತಪ್ಪಿ ಸೇತುವೆಯಿಂದ ಕಮರಿಗೆ ಉರುಳಿದೆ.
ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು.
ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸ್ಥಳಕ್ಕೆ ಸಚಿವ ಎಂ.ಬಿ.ಪಾಟೀಲ್ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದರು.ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
