ಮೈಸೂರು: ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಹೊರತರಲಾಯಿತು.
ಮೈಸೂರಿನ ರ್‍ಯಾಡಿಸನ್ ಬ್ಲೂ ಹೋಟೆಲಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗಕ್ಕೆ ಶುಭ ಹಾರೈಸಿದರು.
ಈ ವೇಳೆ ಸಂಘದ ಅಧ್ಯಕ್ಷ ಪ್ರದೀಪ್ ಕೃಷ್ಣೇಗೌಡ ನೇತೃತ್ವದಲ್ಲಿ ಕ್ಯಾಲೆಂಡರ್ ಬಿಡುಗಡೆಗೆ ಕುಮಾರ ಸ್ವಾಮಿಯವರನ್ನು ಭೇಟಿ ಮಾಡಲಾಯಿತು.
ಈ ಸಂದರ್ಭದಲ್ಲಿ ಬೆಂಗಳೂರು ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಎಚ್ ಕೆ ರಾಮು, ಬಾಲಕೃಷ್ಣ ಎಂ ವರುಣ ಜೆಡಿಎಸ್ ಅಧ್ಯಕ್ಷರು, ಜೆಡಿಎಸ್ ಮುಖಂಡ ಗಂಗಾಧರ ಗೌಡರು ಹಾಗೂ ಬಳಗದ ಸದಸ್ಯರುಗಳಾದ ಕುಮಾರ್ ಬೀಡನಹಳ್ಳಿ ನಾಗರಾಜು, ಚಂದ್ರಶೇಖರ್, ಧರ್ಮಪಾಲ್ ಗೌಡ, ಸುಬ್ರಮಣ್ಯ, ಮಹೇಶ್ ಮತ್ತಿತರರು ಹಾಜರಿದ್ದರು.