ನವದೆಹಲಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗ ಮತ್ತು ವೇತನದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಶನಿವಾರ ಕೇಂದ್ರ ಬಜೆಟ್ ಮಂಡನೆ ಮಾಡಿದ ಸಚಿವರು, 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ವಿನಾಯಿತಿ ನೀಡಿದ್ದಾರೆ.
ಹಾಗಾಗಿ ಇದು ಮಧ್ಯಮವರ್ಗಕ್ಕೆ ಗಿಫ್ಟ್ ನೀಡಿದಂತಾಗಿದೆ, ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ತಿಳಿಸಿದ್ದಾರೆ.