ಮೈಸೂರು: ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನವೆಂಬರ್ 3 ರಂದು ಸಂಜೆ 5 ಗಂಟೆಗೆ 2018 ಹಾಗೂ 2019 ನೇ ಸಾಲಿನ ಚಲನಚಿತ್ರೋತ್ಸವ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭವು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಮ್ಮೀಕಾಂತ ರೆಡ್ಡಿ ಜಿ ಅವರು ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನವೆಂಬರ್ 3 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಉತ್ತಮ ನಟ, ನಟಿ, ನಿರ್ದೇಶಕರು ಹಾಗೂ ಇನ್ನಿತರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ವೇದಿಕೆಯನ್ನು ಉತ್ತಮ ರೀತಿಯಲ್ಲಿ ಸಜ್ಜುಗೊಳಿಸಬೇಕು. ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಸಿನಿಮಾ ಗಣ್ಯರಿಗೆ ವಾಸ್ತವ್ಯದ ವ್ಯವಸ್ಥೆ ಬೇಕಿದ್ದಲ್ಲಿ ಮೊದಲೇ ಪಟ್ಟಿ ಮಾಡಿಕೊಂಡು ಉತ್ತಮ ವಾಸ್ತವ್ಯವನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಗಳು ಆದೇಶಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಾಹನಗಳಿಗೆ ಸಾಮಾನ್ಯ ಹಾಗೂ ಗಣ್ಯರ ಪಾರ್ಕಿಂಗ್ ವ್ಥವಸ್ಥೆಗೆ ಇರುವ ಸ್ಥಳಾವಕಾಶ ಹಾಗೂ ಸ್ಥಳವಕಾಶವನ್ನು ನಿಗದಿಮಾಡಿ ಬಂದೋಬಸ್ತ್ ಕಲ್ಪಿಸಬೇಕು ಎಂದು ಲಕ್ಷ್ಮೀಕಾಂತರೆಡ್ಡಿ ಸಲಹೆ ನೀಡಿದರು.
ಸಭೆಯಲ್ಲಿ ಮೈಸೂರು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮೈಸೂರು ನಗರ ಡಿ.ಸಿ.ಪಿ ಆರ್.ಎನ್ ಬಿಂದುಮಣಿ, ಸಹಾಯಕ ಪೊಲೀಸ್ ಆಯುಕ್ತ ಶಿವಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ವಿನೋದ್ ಚಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

