ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಪ್ರಕರಣ:ತಾಯಿ,ಮಗಳು ಅರೆಸ್ಟ್

Spread the love

ಬೆಂಗಳೂರು: ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಮತ್ತು ಪುತ್ರಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು ಇಬ್ಬರನ್ನೂ ಬಂಧಿಸಲಾಗಿದೆ

ಪುತ್ರ ಕಾರ್ತಿಕೇಶ್‌ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ ಮತ್ತು ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ ದಾಖಲಾಗಿದೆ,ಜತೆಗೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಕಳೆದ ಒಂದು ವಾರದಿಂದ ತಾಯಿ ಪಲ್ಲವಿ ತಂದೆಗೆ ಕೊಲೆ ಬೆದರಿಕೆ ಹಾಕುತ್ತಿದ್ದರು.ಹಾಗಾಗಿ ತಂದೆ ಅವರ ಸಹೋದರಿ ಸರಿತಾ ಮನೆಗೆ ಹೋಗಿದ್ದರು. ಎರಡು ದಿನಗಳ ಹಿಂದೆ ಕೃತಿ ಸರಿತಾ ಅವರ ಮನೆಗೆ ಹೋಗಿ ಪೀಡಿಸಿ ಕರೆ ತಂದಿದ್ದಳು.

ಏ.20ರ ಸಂಜೆ 5 ಗಂಟೆ ವೇಳೆ ನಾನು ದೊಮ್ಮಲೂರಿನಲ್ಲಿರುವ ಗಾಲ್ಫ್‌ ಅಸೋಸಿಯೇಷನ್‌ನಲ್ಲಿ ಇದ್ದಾಗ ನಮ್ಮ ಮನೆಯ ಪಕ್ಕದ ಮನೆಯವರು ಕರೆ ಮಾಡಿ ನಿಮ್ಮ ತಂದೆಯ ದೇಹ ಕೆಳಗಡೆ ಬಿದ್ದಿದೆ ಎಂದು ತಿಳಿಸಿದರು ಓಂ ಪ್ರಕಾಶ್ ಪುತ್ರ ಕಾರ್ತಿಕೇಶ್ ದೂರಿನಲ್ಲಿ ತಿಳಿಸಿದ್ದಾರೆ.

ಕೂಡಲೇ ದೊಮ್ಮಲೂರಿನಿಂದ ಹೊರಟು ಸಂಜೆ 5:45ಕ್ಕೆ ಮನೆಗೆ ಆಗಮಿಸಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರು ಇದ್ದರು. ತಂದೆಯ ತಲೆಯಿಂದ ರಕ್ತ ಬರುತ್ತಿತ್ತು. ದೇಹದ ಪಕ್ಕದಲ್ಲಿ ಬಾಟಲ್‌ ಮತ್ತು ಚಾಕು ಇತ್ತು. ನನ್ನ ತಾಯಿ ಪಲ್ಲವಿ ಮತ್ತು ತಂಗಿ ಕೃತಿ ಖಿನ್ನತೆಯಿಂದ ಬಳಲುತ್ತಿದ್ದು ಅವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಅವರ ವಿರುದ್ಧ ಕಾನೂ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಕೋರಿದ್ದಾರೆ.