ಮೈಸೂರು: ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮ್ಗಳಿಂದ ಆಗುತ್ತಿರುವ ಅನಾಹುತಗಳನ್ನು ತಡೆಯಲು ಕೂಡಲೇ ಅವುಗಳನ್ನು ನಿಷೇಧಿಸಬೇಕು ಎಂದು ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಆನ್ಲೈನ್ ಬೆಟ್ಟಿಂಗ್ ಹಾಗೂ ಆನ್ಲೈನ್ ಗೇಮಿಂಗ್ ವೆಬ್ಸೈಟ್ಗಳಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ವಿಷಾದಿಸಿದ್ದಾರೆ.
ಆನ್ಲೈನ್ ಬೆಟ್ಟಿಂಗ್ ಜಾಲಕ್ಕೆ ಸಿಲುಕಿರುವವರು ಬಹುತೇಕ ಯುವಕ–ಯುವತಿಯರೇ ಆಗಿದ್ದಾರೆ. ಪದವಿ ಪಡೆದು ಉದ್ಯೋಗ ಗಳಿಸಿ ಕುಟುಂಬದ ಜವಾಬ್ದಾರಿ ನೋಡಿಕೊಳ್ಳಬೇಕಾದ ಸಮಯದಲ್ಲಿ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ನರಳುತ್ತಿದ್ದಾರೆ.
ಸಾವಿರಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ.ಇದೆಲ್ಲ ತಿಳಿದಿದ್ದರೂ ಉನ್ನತ ಸ್ಥಾನದಲ್ಲಿರುವವರು ಜಾಣ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನಧಿಕೃತವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆನ್ಲೈನ್ ಬುಕ್ಕಿಗಳ ಮೇಲೆ
ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ ಅದೇನೋ ಸರೀನೆ,ಆದರೆ ಅಂತವರಿಗೆ ಕಠಿಣ ಶಿಕ್ಷೆಆಗಬೇಕಿದೆ ಎಂದು ವಿಕ್ರಂ ಅಯ್ಯಂಗಾರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಯುವ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.