ಇಸ್ಲಮಾಬಾದ್: ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಕಮರ್ ಜಾವೇದ್ ಬಜ್ವಾ ಅವರು ನಿಧನ ಹೊಂದಿದ್ದಾರೆ.
ಕಳೆದ ತಿಂಗಳು ಅವರು ಸ್ನಾನಗೃಹದಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.ಆಗಿನಿಂದಲೂ ರಾವಲ್ಪಿಂಡಿಯ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರೆ.ಅವರಿಗೆ 65 ವರ್ಷಗಳಾಗಿತ್ತು.
ಕಮರ್ ಬಜ್ವಾ ಅವರನ್ನು ಫೆಬ್ರವರಿ 11 ರಂದು ರಾವಲ್ಪಿಂಡಿ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಜ್ವಾ 2016 ರಿಂದ 2022 ರ ವರೆಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.
2022ರಲ್ಲಿ ನಿವೃತ್ತರಾದ ನಂತರ, ಬಾಜ್ವಾ ಅವರು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
