ಇಸ್ಲಾಮಾಬಾದ್: ಪಾಕ್ ರಾಜಧಾನಿ ಇಸ್ಲಮಾಬಾದ್ನ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 69 ಮಂದಿ ಮೃತಪಟ್ಟಿದ್ದು,150 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಇಸ್ಲಾಮಾಬಾದ್ನಲ್ಲಿ ಭಾರಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಆತ್ಮಾಹುತಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ
