ಪಾಕಿಸ್ತಾನದಲ್ಲಿ ಐಇಡಿ ಬಾಂಬ್ ಸ್ಫೋಟ:11 ಕಾರ್ಮಿಕರ ದುರ್ಮರಣ

Spread the love

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಗಣಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್​ ಬಾಂಬ್​ ಸ್ಫೋಟದಿಂದ‌ ಛಿದ್ರಗೊಂಡು 11 ಕಾರ್ಮಿಕರು ದಾರುಣವಾಗಿ ಮೃತಪಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬ್​ ಸ್ಫೋಟಿಸಿ 11 ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಲ್ಲಿದ್ದಲು ಗಣಿ ಕಾರ್ಮಿಕರನ್ನು ಟ್ರಕ್​​ನಲ್ಲಿ ಕರೆದೊಯ್ಯುತ್ತಿದ್ದಾಗ ಬಾಂಬ್​ ಸ್ಫೋಟಗೊಂಡಿದೆ. ಐಇಡಿ ಬಾಂಬ್​​ ಅನ್ನು ರಸ್ತೆ ಬದಿಯಲ್ಲಿ ಅಡಗಿಸಿಟ್ಟಿದ್ದರಿಂದ ಅದು ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹರ್ನಾಯಿ ಜಿಲ್ಲಾ ಆಯುಕ್ತ ಹಜರತ್​ ವಾಲಿ ಕಾಕರ್​ ತಿಳಿಸಿದ್ದಾರೆ.

ಘಟನೆಯಲ್ಲಿ 9 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದು,ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ, ಗಾಯಗೊಂಡವರನ್ನು ಮಂದಿ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಲೂಚಿಸ್ತಾನ್​ ಸರ್ಕಾರದ ವಕ್ತಾರ ಶಹೀದ್​, ಇದೊಂದು ದುರಂತ ಘಟನೆ, ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದಿದ್ದಾರೆ.

ಬಲೋಚಿಸ್ಥಾನದ ಹರ್ನಾಯಿಯಲ್ಲಿ ಇದೇ ರೀತಿಯ ಬಾಂಬ್​​ ಸ್ಫೋಟದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿದ್ದವು.