ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಉರುಳಿದ ಘಟನೆಯಲ್ಲಿ ಮತ್ತೊಂದು ದೇಹ ಪತ್ತೆಯಾಗಿದೆ.
ಹಾಲಹಳ್ಳಿ ಸ್ಲಂ ನಿವಾಸಿ ಪೀರ್ ಖಾನ್ ಶವ ಪತ್ತೆಯಾಗಿದ್ದು ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಫೆ.3 ರಂದು ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿದ ವೇಳೆ ಒಬ್ಬನನ್ನ ರಕ್ಷಿಸಲಾಗಿತ್ತು. ಇಬ್ಬರ ದೇಹ ಪತ್ತೆಯಾಗಿತ್ತು.
ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ವಾಪಸಾಗುವಾಗ ಚಾಲಕನ ನಿಯಂತ್ರಣ ತಪ್ಪಿಕಾರು ನಾಲೆಗೆ ಉರುಳಿದೆ.
ನಾಲೆ ಪಕ್ಕ ತಡೆಗೋಡೆ ಇಲ್ಲದಿದ್ದರಿಂದ ಕಾರು ನಾಲೆಯೊಳಗೆ ಉರುಳಿದೆ.. ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಆ ಸಮಯದಲ್ಲಿ ಸಾವು-ಬದುಕಿನ ನಡುವೆ ಸೆಣಸಾಡುತ್ತಿದ್ದ ನಯಾಜ್‌ನನ್ನು ನೀರಿನಿಂದ ಹೊರತಂದು ಪ್ರಾಣ ರಕ್ಷಿಸಿದ್ದಾರೆ. ನಂತರದಲ್ಲಿ ಕಾರು ನೀರಿನೊಳಗೆ ಮುಳುಗಿದ್ದರಿಂದ ಮೂವರು ಮೃತಪಟ್ಟಿದ್ದಾರೆ.