ಮೈಸೂರು: ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಸಂತೆಪೇಟೆಯಲ್ಲಿ 50 ವರ್ಷದಿಂದ ಪತ್ರಿಕೆ ವಿತರಣೆ ಮಾಡುತ್ತಿರುವ ರಮಾದೇವಿ ರವರಿಗೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಜನಸಾಮಾನ್ಯರಿಗೆ ಮುಂಜಾನೆ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ವಿತರಕರು ಬಿಸಿಲು, ಚಳಿ, ಮಳೆ ಎನ್ನದೆ ಪ್ರತಿನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸವ ಕಾರ್ಯ ಮಾಡುತ್ತಾರೆ, ಜಗತ್ತು ಎಷ್ಟೇ ಆಧುನಿಕತೆಯಲ್ಲಿ ಬೆಳೆದರೂ ಪತ್ರಿಕೆಗಳನ್ನು ಓದುವುದನ್ನು ಮಾತ್ರ ಯಾರೂ ಬಿಡುವುದಿಲ್ಲ ಅವರುಗಳಿಗೆ ಸಮಯಕ್ಕೆ ಸರಿಯಾಗಿ ಪತ್ರಿಕೆ ವಿತರಿಸುವ ಪತ್ರಿಕಾ ವಿತರಕರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು ಎಂದು ತಿಳಿಸಿದರು.
ಜನರು ಪತ್ರಿಕಾ ವಿತರಕರನ್ನು ಕೀಳು ಮಟ್ಟದಲ್ಲಿ ನೋಡುವುದು ಬದಲಾವಣೆಯಾಗಬೇಕು, ಪತ್ರಿಕಾ ವಿತರಕರನ್ನೂ ಕೂಡ ಗೌರವಿಸುವಂತಾಗಬೇಕು ಎಂದು ರೇಖಾ ಶ್ರೀ ನಿವಾಸ್ ತಿಳಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಿಕಾ ವಿತರಕರಾದ ರಮಾದೇವಿ ಅವರು,
ಮಳೆ ಚಳಿ ಎನ್ನದೆ ವರ್ಷವಿಡಿ ಕೆಲಸ ಮಾಡಬೇಕು, ನಮಗೆ ರಜೆಯೂ ಇಲ್ಲ, ಇಷ್ಟಾದರೂ ಸಾಮಾಜಿಕ ಭದ್ರತೆ ಇಲ್ಲ,ಸಾಮಾಜಿಕ ಭದ್ರತೆ ಇಲ್ಲ, ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿ ಸಾಮಾಜಿಕ ಭದ್ರತೆ ಕೊಡಬೇಕು, ಕಾರ್ಮಿಕ ಇಲಾಖೆಯಿಂದ
ಗುರುತಿನ ಚೀಟಿ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಜಿ ರಾಘವೇಂದ್ರ, ಎಸ್. ಎನ್ ರಾಜೇಶ್, ರಾಕೇಶ್, ಅಶ್ವಿನಿ ಗೌಡ, ಪಾಂಡು ಮತ್ತಿತರರು ಹಾಜರಿದ್ದರು.