ತಿಮ್ಮಪ್ಪನ ಕ್ಷಮೆ ಕೋರಿ‌ ಪ್ರಾಯಶ್ಚಿತ ದೀಕ್ಷೆತೊಟ್ಟ ಪವನ್ ಕಲ್ಯಾಣ್‌

Spread the love

ಬೆಂಗಳೂರು: ತಿರುಪತಿಯಲ್ಲಿ ಪ್ರಸಾದವಾಗಿ ನೀಡಿದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ವರದಿಯ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಕ್ಷಮೆ ಕೋರಿ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಸೆ.22 ರಿಂದ 11 ದಿನದ ಪ್ರಾಯಶ್ಚಿತ ದೀಕ್ಷೆ ಕೈಗೊಂಡಿದ್ದಾರೆ.

ತಿರುಪತಿ ಲಡ್ಡು ವಿವಾದದ ಬಗ್ಗೆ ಎಕ್ಸ್‌ನಲ್ಲಿ ಪವನ್ ಕಲ್ಯಾಣ್ ಪ್ರತಿಕ್ರಿಯಿಸಿ, ತಿರುಪತಿ ಲಡ್ಡು ಅಂದರೆ ಅಮೃತಕ್ಕೆ ಸಮನಾಗಿ ನೋಡುತ್ತೇವೆ,ಈ ಲಡ್ಡು ಪ್ರಸಾದ ಅಶುದ್ಧವಾಗಿದೆ,ಈ ಪಾಪವನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗದಿರುವುದು ಹಿಂದೂ ಜನಾಂಗಕ್ಕೆ ಕಳಂಕ ಎಂದು ಪಶ್ಚಾತ್ತಾಪ ಪಟ್ಟಿದ್ದಾರೆ.

ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಬೆರಸಿರುವುದು ಗೊತ್ತಾದಾಗ ಬೆಚ್ಚಿಬಿದ್ದೆ. ತಪ್ಪಿತಸ್ಥ ಎಂಬ ಭಾವನೆ, ಜನರ ಹಿತಕ್ಕಾಗಿ ಹೋರಾಟ ನಡೆಸುತ್ತಿರುವ ನನಗೆ ಆರಂಭದಲ್ಲಿ ಇಂತಹ ತೊಂದರೆಗಳು ಗಮನಕ್ಕೆ ಬಾರದಿರುವುದು ನೋವು ತಂದಿದೆ. ಸನಾತನ ಧರ್ಮವನ್ನು ನಂಬಿ ಆಚರಿಸುವ ಎಲ್ಲರೂ ಇದಕ್ಕೆ ತಕ್ಕ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಅದರ ಭಾಗವಾಗಿ ನಾನು ಪ್ರಾಯಶ್ಚಿತ್ತ ದೀಕ್ಷೆಯನ್ನು ಮಾಡುವ ಸಂಕಲ್ಪವನ್ನು ಕೈಗೊಂಡಿದ್ದೇನೆ.ಸೆಪ್ಟೆಂಬರ್ 22 ಭಾನುವಾರ ಬೆಳಗ್ಗೆ ಗುಂಟೂರು ಜಿಲ್ಲೆಯ ನಂಬೂರಿನಲ್ಲಿ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೀಕ್ಷೆಯನ್ನು ಕೈಗೊಳ್ಳುತ್ತಿದ್ದೇನೆ. ಇಂದಿನಿಂದ 11 ದಿನಗಳ ಕಾಲ ದೀಕ್ಷೆಯನ್ನು ಮಾಡುತ್ತೇನೆ. ಬಳಿಕ ತಿರುಮಲಕ್ಕೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ‌

ಹಿಂದೂಧರ್ಮವನ್ನು ಅದರ ಸಂಸ್ಕೃತಿಯನ್ನು ಉದ್ದರಿಸಬೇಕಾದ ಕಾಲವಿದು, ನಮ್ಮ ಧರ್ಮವನ್ನು ನಾವು ಕಾಪಾಡಿಕೊಳ್ಳೋಣ ಎಂದು ಪವನ್ ಕಲ್ಯಾಣ್ ಕರೆ ನೀಡಿದ್ದಾರೆ.

ಸನಾತನ ಧರ್ಮದ ಮೇಲೆ ದಾಳಿ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದೂ ಹೇಳಿದ್ದಾರೆ.