ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಪವಿತ್ರಾ ಗೌಡ ಪರ ವಕೀಲರು ತಾಂತ್ರಿಕ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಆ.30ರಂದು ಸೆಷನ್ಸ್ ಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ಪವಿತ್ರಗೌಡ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿ, ಪವಿತ್ರಗೌಡ ವಿರುದ್ಧ ಆರೋಪಪಟ್ಟಿಯನ್ನು ಬಿಎನ್ಎಸ್ ಬದಲು ಸಿಆರ್ಪಿಸಿ ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ. ಇದು ಕಾನೂನು ಬಾಹಿರವಾಗಿರುವುದರಿಂದ ಕಡ್ಡಾಯ ಜಾಮೀನಿಗೆ ನಮ್ಮ ಕಕ್ಷಿದಾರರು ಅರ್ಹರು, ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.
ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಾಲಯ ಸೆ.2ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.