ಮೈಸೂರು: ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದದವರು ಮೈಸೂರಿನ ಜೆ.ಪಿ. ನಗರದಲ್ಲಿರುವ ಶ್ರೀ ಪೇಜಾವರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಕಾಯಿ ಹೋಳಿಗೆ, ಹಣ್ಣು, ಹಂಪಲು ವಿತರಿಸಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಜೆ.ಡಿ.ಎಸ್. ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಪುಟ್ಟಣ್ಣ, ಸತೀಶ್ , ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್,ಛಾಯಾ,ಗಾಯಕ ಯಶ್ವಂತ್ ಕುಮಾರ್, ಹಿರಿಯ ಕ್ರೀಡಾಪಟು ಮಹದೇವ್, ಸುಬ್ರಮಣಿ ,ರಾಜೇಶ್ ಕುಮಾರ್, ಮಹೇಶ್,ಕ್ರೀಡಾ ತರಬೇತಿದಾರ ಜಗದೀಶ್ , ಕಾಶಿನಾಥ್,ದತ್ತ, ಎಸ್.ಪಿ.ಅಕ್ಷಯ್ ಪ್ರಿಯಾದರ್ಶನ್, ಹರ್ಷಿತ್ ಎಸ್ ನಾಗೇಶ್ ಮತ್ತಿತರರು ಹಾಜರಿದ್ದರು.
