ಮೈಸೂರು: ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ವಿತರಣೆ ಮಾಡಲು ಹೋಗುತ್ತಿದ್ದ ವ್ಯಕ್ತಿಗೆ ನಗರಸಭೆ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ.
ಹೂಟಗಳ್ಳಿ ನಗರಸಭೆ ವ್ಯಾಪ್ತಿಯ ಬೆಳವಾಡಿ ಗ್ರಾಮದ ಅಂಗಡಿಗಳಿಗೆ ಪ್ಲಾಸ್ಟಿಕ್ ಕವರ್ ವಿತರಣೆ ಮಾಡಲು ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಡಿದು ದಂಡ ಹಾಕಿ ಕಠಿಣ ಎಚ್ಚರಿಕೆ ನೀಡಲಾಗಿದೆ.
ಆ ವ್ಯಕ್ತಿ ಸಾಗಿಸುತ್ತಿದ್ದ ಪ್ಲಾಸ್ಟಿಕ್ ಕವರ್ ಸೀಸ್ ಮಾಡಿ 5000 ರೂ ದಂಡ ವಿಧಿಸಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯಾಧಿಕಾರಿಗಳಾದ ನೇತ್ರಾವತಿ, ಶಂಕರ್ ಲಿಂಗೇಗೌಡ, ಶಿವಪ್ರಸಾದ್, ಪಂಚಾಯತ್ ಗ್ರಾಮ ಅಭಿವೃದ್ಧಿ ಸಂಸ್ಥೆಯ ಎನ್ ಜಿ ಒ ಅಧ್ಯಕ್ಷ ಯಾದವ್ ಹರೀಶ್ ಹಾಗೂ ನಗರ ಸಭೆಯ ಸಮುದಾಯ ಸಂಚಾಲಕರು ಹಾಜರಿದ್ದರು.
