ಪ್ಲಾಸ್ಟಿಕ್ ಮುಕ್ತ ವಸ್ತು ಪ್ರದರ್ಶನ-ಚೇತನ್ ಕಾಂತರಾಜ್ ಸ್ವಾಗತ

Spread the love

ಮೈಸೂರು: ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಬಾರಿಯ ವಸ್ತು ಪ್ರದರ್ಶನವನ್ನು ಪ್ಲಾಸ್ಟಿಕ್ ಮುಕ್ತವಾಗಿ ಆಯೋಜನೆ ಮಾಡಲು ಹೊರಟಿರುವುದನ್ನು
ಜೈ ಭೀಮ್ ಜನಸ್ಪಂದನ ವೇದಿಕೆಯ ಅಧ್ಯಕ್ಷ ಚೇತನ್ ಕಾಂತರಾಜ್ ಸ್ವಾಗತಿಸಿದ್ದಾರೆ.

ಅದಕ್ಕಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯುಬ್ ಖಾನ್ ಅವರ ನಡೆ ಸ್ವಾಗತಾರ್ಹ ಎಂದ ಅವರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ವಸ್ತು ಪ್ರದರ್ಶನದ ಪ್ರಾಧಿಕಾರದ ಮುಂಭಾಗದಲ್ಲಿಯೇ ಸಾರ್ವಜನಿಕರಿಗೆ ಉಚಿತ ಬಟ್ಟೆ ಚೀಲಗಳನ್ನು ವಿತರಿಸಲಾಗುತ್ತದೆ. ಅವಶ್ಯಕತೆ ಇರುವ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.ವಸ್ತು ಪ್ರದರ್ಶನವನ್ನು ವೀಕ್ಷಿಸಲು ಹಾಗೂ ಉತ್ಪನ್ನಗಳನ್ನು ಕೊಂಡುಕೊಳ್ಳಲು ಬರುವ ಸಾರ್ವಜನಿಕರು ಪ್ಲಾಸ್ಟಿಕ್ ಬ್ಯಾಗ್ ಗಳ ಬದಲಾಗಿ ಬಟ್ಟೆ ಚೀಲಗಳನ್ನು ತಂದು ಪ್ಲಾಸ್ಟಿಕ್ ಮುಕ್ತ ವಸ್ತು ಪ್ರದರ್ಶನಕ್ಕೆ ಸಾರ್ವಜನಿಕರು ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಮೊದಲು ಮೈಸೂರು ನಗರವು ಇಡಿ ಭಾರತದಲ್ಲಿ ಸ್ವಚ್ಛ ನಗರ ಎಂದು ಹೆಸರು ಪಡೆದಿತ್ತು, ಆದುದರಿಂದ ಈ ಬಾರಿಯ ದಸರಾ ಹಬ್ಬವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಚೇತನ್ ಕಾಂತರಾಜ್ ಕರೆ ನೀಡಿದ್ದಾರೆ.