ಪ್ಲೇ ವುಡ್ ಗೋದಾಮಿನಲ್ಲಿ ಬೆಂಕಿ ಅವಘಡ

Spread the love

ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲದ‌ ಪ್ಲೇ ವುಡ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ವಸ್ತುಗಳು‌ ಸುಟ್ಟು ಕರಕಲಾಗಿವೆ.

ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿಯಾಗಿವೆ.

ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಬಳಿಯ ವೃಕ್ಷ ಪ್ಲೇ ವುಡ್ ಗೋದಾಮಿನಲ್ಲಿ ಈ ಘಟನೆ ನಡೆದಿದ್ದು,ಈ ಫ್ಯಾಕ್ಟರಿ ಮಹೇಶ್ ಎಂಬುವವರಿಗೆ ಸೇರಿದ್ದಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯ
ಮಾಡಿದರು.

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.