ಮೈಸೂರು: ಮೈಸೂರು ನಗರದ ಉದಯಗಿರಿ , ನರಸಿಂಹರಾಜ ಹಾಗೂ ಮಂಡಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಕಮಾಂಡೋ ಪಡೆಗಳೊಂದಿಗೆ ವಿಶೇಷ ರೌಂಡ್ಸ್ ಮಾಡಿ ವಿಶೇಷ ಕಾರ್ಯಾಚರಣೆ ನಡೆಸಿ ಕಿಡಿಗೇಡಿಗಳಿಗೆ ಕಠಿಣ ಎಚ್ಚರಿಕೆ ರವಾನಿಸಿದ್ದಾರೆ.
ಸಾರ್ವಜನಿಕ ರಸ್ತೆ ಹಾಗೂ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಕಾನೂನು ಉಲ್ಲಂಘನೆ ಮಾಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವವರ ವಿರುದ್ಧ ಪರಿಶೀಲನೆ ಮಾಡಿ ಸುಮಾರು 33 ಮಂದಿಯನ್ನು ತಪಾಸಣೆಗೊಳಪಡಿಸಿದರು.
ಅಲ್ಲದೆ 166 ಲಘು ಪ್ರಕರಣಗಳು,108 ಕೊಪ್ಟಾ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಯಿತು.
ರಾತ್ರಿ 10.30 ಕ್ಕೆ ಪ್ರಮುಖ ರಸ್ತೆ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ನಿಗದಿತ ಸಮಯಕ್ಕೆ ಮುಚ್ಚಿಸಿ ಕ್ರಮ ಕೈಗೊಳ್ಳಲಾಯಿತು.
ನಿಗದಿತ ಸಮಯದ ನಂತರ ಸಕಾರಣವಿಲ್ಲದೆ ಅನವಶ್ಯಕವಾಗಿ ಅಡ್ಡಾಡಿದ್ದಿ ಓಡಾಡುವ ವ್ಯಕ್ತಿಗಳು ಮತ್ತು ವಾಹನಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮೈಸೂರು ನಗರದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೋರಿದ್ದಾರೆ.
