ವೀರನಹೊಸಳ್ಳಿ ಬಳಿ ದಸರಾ ಗಜಪಡೆಗೆಸಾಂಪ್ರದಾಯಿಕ ಪೂಜೆ

Spread the love

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಗಜಪಯಣ ಸ್ವಾಗತ ಕಾರ್ಯಕ್ರಮಕ್ಕೆ ಸೋಮವಾರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ, ವೀರನಹೊಸಳ್ಳಿ ಬಳಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.

ವೀರನಹೊಸಳ್ಳಿ ಗ್ರಾಮದ ಬಳಿ ಮಧ್ಯಾಹ್ನ 12.34ರಿಂದ 12.59ರ ತುಲಾ ಲಗ್ನದಲ್ಲಿ ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣ ಆರಂಭವಾಯುತು.

ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಒಟ್ಟು 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ, 9 ಆನೆಗಳ ಮೊದಲ ತಂಡ ಅಭಿಮನ್ಯು ನೇತೃತ್ವದಲ್ಲಿ ಮೈಸೂರು ನಗರಕ್ಕೆ ಆಗಮಿಸುತ್ತಿವೆ.

ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಸೇರಿದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.