post

ಜೆಡಿಎಸ್ ವಿರುದ್ಧ ಪ್ಲೆಕ್ಸ್ ಸಮರ ಸಾರಿದ ಕಾಂಗ್ರೆಸ್

ಮೈಸೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿ-ಜೆಡಿಎಸ್  ಹೋರಾಟ ನಡೆಸುತ್ತಿರುವಾಗಲೇ ಕಾಂಗ್ರೆಸ್ ನವರು ಜೆಡಿಎಸ್ ವಿರುದ್ಧ ಪ್ಲೆಕ್ಸ್ ಸಮರ ಸೇರಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮೂಡ ಹಗರಣ ವಿಚಾರ ಮುಂದಿಟ್ಟುಕೊಂಡು ಬಿಜೆಪಿ,ಜೆಡಿಎಸ್ ಪಾದಯಾತ್ರೆ ಮಾಡುತ್ತಿವೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೂಡಾ ಜನಾಂದೋಲನ ಹಮ್ಮಿಕೊಂಡು,ಸಮಾವೇಶ ನಡೆಸಿ,ಶಕ್ತಿ ಪ್ರದರ್ಶನ ಮಾಡಿದೆ.

ಶುಕ್ರವಾರ ಸಮಾರೋಪ ಮೈಸೂರಿನಲ್ಲಿ ನಡೆಯುತ್ತಿದ್ದು, ಜೆಡಿಎಸ್ ವಿರುದ್ಧ  ಪ್ಲೆಕ್ಸ್ ಹಾಕುವ ಅವರ ಬಣ್ಣ ಬಯಲು ಮಾಡಿದೆ.

ನಗರದ ಹಲವೆಡೆ ಕಾಂಗ್ರೆಸ್ ನವರು ಜೆಡಿಎಸ್ ವಿರುದ್ಧ ಪ್ಲೆಕ್ಸ್ ಗಳನ್ನು ಹಾಕಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಅದರಲ್ಲೂ ದೇವೇಗೌಡರ ಕುಟುಂಬದವರು ಮೂಡ ನಿವೇಶನ ಪಡೆದಿದ್ದಾರೆಂದು ಪ್ಲೆಕ್ಸ್ ಗಳನ್ನು ಸಮಾವೇಶದ ಸ್ಥಳ ಸೇರಿದಂತೆ‌ ಅನೇಕ ಕಡೆ ಹಾಕಲಾಗಿದೆ.

ಇದನ್ನು ವಿರೋಧಿಸಿ ಬೆಳಿಗ್ಗೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ವೇಳೆ  ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಜೆಡಿಎಸ್ ವಿರುದ್ಧ ಪ್ಲೆಕ್ಸ್ ಸಮರ ಸಾರಿದ ಕಾಂಗ್ರೆಸ್ Read More

ತುಂಗಭದ್ರಾ ಜಲಾಶಯದ 19 ನೇ ಗೇಟ್​​ ಚೈನ್ ಲಿಂಕ್ ಕಟ್:ಅಪಾರ ನೀರು ವೇಸ್ಟ್

ಕೊಪ್ಪಳ: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನೆ ನಂಬರ್‌ ಗೇಟ್​​ನ ಚೈನ್ ಲಿಂಕ್ ತುಂಡಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.

ಶನಿವಾರ ರಾತ್ರಿ ಸುಮಾರು 11 ಗಂಟೆ ವೇಳೆ ಚೈನ್ ಲಿಂಕ್ ತುಂಡಾಗಿ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದೆ.ಈ ಭಾಗದ ಬೆಳೆಗಳಿಗೂ ಹಾನಿಯಾಗಿದೆ.

ಅಪಾರ ಪ್ರಮಾಣದ ನೀರು ಹೊರಬರುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳಿಗೆ ಮಾತ್ರವಲ್ಲದೇ ನೆರೆಯ ಆಂಧ್ರ, ತೆಲಂಗಾಣ ‌ರಾಜ್ಯಗಳ ಪಾಲಿನ ಜೀವನಾಡಿಯಾದ ತುಂಗಭದ್ರ ಜಲಾಶಯದಿಂದ ನೀರು ಹರಿದು ಹೋಗುತ್ತಿರುವುದರಿಂದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ತಡ ರಾತ್ರಿಯೇ ಬೆಂಗಳೂರಿಂದ ಮುನಿರಬಾದ್ ಗೆ ಆಗಮಿಸಿದ‌ ಸಚಿವ ತಂಗಡಗಿ ಜಲಾಶಯವನ್ನು ಪರಿಶೀಲನೆ ನಡೆಸಿದ್ದಾರೆ.‌

19 ಗೇಟ್ ದುರಸ್ಥಿಗಾಗಿ ಡ್ಯಾಂ ನಲ್ಲಿರುವ ಕನಿಷ್ಠ 60 ಟಿಎಂಸಿ ನೀರು ಖಾಲಿ ಅನಿವಾರ್ಯ ಎಂದು ಇಂಜಿನಿರುಗಳು ಹೇಳಿದ್ದಾರೆ.‌ ತುಂಗಭದ್ರಾ ಜಲಾಶಯದ‌ 19ನೇ ಗೇಟ್ ರಿಪೇರಿ ಕುರಿತು ಚರ್ಚಿಸಲು ಬೆಂಗಳೂರು, ಹೈದರಾಬಾದ್ ನಿಂದ ತಜ್ಞರನ್ನು ಕರೆಸಲಾಗುತ್ತಿದೆ.

ತುಂಗಭದ್ರಾ ಜಲಾಶಯದ 19 ನೇ ಗೇಟ್​​ ಚೈನ್ ಲಿಂಕ್ ಕಟ್:ಅಪಾರ ನೀರು ವೇಸ್ಟ್ Read More

ಯುವ ಡಿವೋರ್ಸ್‌ ಪ್ರಕರಣ ಆ. 23ಕ್ಕೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 23ಕ್ಕೆ ಮುಂದೂಡಲಾಗಿದೆ.

ಗುರುವಾರ 1ನೆ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.

ಈ ವೇಳೆ ವಿಚ್ಚೇದನ ಅರ್ಜಿಗೆ ಯುವ ಪತ್ನಿ ಶ್ರೀದೇವಿ ಭೈರಪ್ಪ ಅವರ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಮನವಿಗೆ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾಗಿರುವ ಕಾರಣ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಮೊದಲು ಕೌನ್ಸಿಲಿಂಗ್‌ ಮುಕ್ತಾಯವಾಗಬೇಕು ಎಂದು ಹೇಳಿದರು.

ಯುವ ಡಿವೋರ್ಸ್‌ ಪ್ರಕರಣ ಆ. 23ಕ್ಕೆ ಮುಂದೂಡಿಕೆ Read More

ಆ. 14ರ ತನಕ ದರ್ಶನ್‌ ಅಂಡ್ ಗ್ಯಾಂಗ್ ಗೆ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ ನ  ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಆಗಸ್ಟ್‌ 14 ರವರೆಗೆ ವಿಸ್ತರಿಸಿ ಆದೇಶಿಸಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.

ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿಯ  ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್‌ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.

ಆ. 14ರ ತನಕ ದರ್ಶನ್‌ ಅಂಡ್ ಗ್ಯಾಂಗ್ ಗೆ ಜೈಲೇ ಗತಿ Read More

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ಮತ್ತು ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದರು.

ಮುಂಜಾನೆ ಸುಮಾರು 5 ಗಂಟೆಗೆ ಕಮಿಷನರ್ ಇಡಾ ಯಾರ್ಟಿನ್ ಮಾರ್ಬನಿಂಗ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಯಿತು.

40 ಅಧಿಕಾರಿಗಳು ಮತ್ತು 220ಕ್ಕೂ ಹೆಚ್ಚು ಸಿಬ್ಬಂದಿ ಈ ದಾಳಿ ನಡೆಸಿದರು, ಈ ವೇಳೆ
ಮೂರು ಚಾಕು,10 ತಂಬಾಕು ಪೊಟ್ಟಣ, ಸಿಗರೇಟು, ಸಣ್ಣ ಹೀಟರ್ ತಂತಿ ಬಂಡಲ್, ಎಲೆಕ್ಟ್ರಿಕ್ ತಾತ್ಕಾಲಿಕ ಒಲೆ ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಸೇರಿ 260ಕ್ಕೂ ಅಧಿಕ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ Read More

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್

ರಾಮನಗರ: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ ಮತ್ತು ಅವರ ಸರ್ಕಾರಕ್ಕೆ ಮುಟ್ಟಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

ನಮ್ಮ ಹೋರಾಟದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರ ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಮನಗರದ ಕೆಂಗಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ ವೇಣುಗೋಪಾಲ್, ಸುರ್ಜೇವಾಲಾ ಅವರು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ, ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ,ಹಗರಣದಲ್ಲಿ ಮುಳುಗಿದ ಸರ್ಕಾರದ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥನೆ ಮಾಡಲು ದೆಹಲಿ ಗಾಂಧಿ ಕುಟುಂಬದ ಸಂದೇಶವನ್ನು ನೀಡಿ ಹೋಗಿದ್ದಾರೆ ಎಂದು ವ್ಯಂಗ್ಯ ವಾಡಿದರು.

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್ Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ.

ಮೈಸೂರಿನ ಸ್ನೇಹ ಮಯಿ ಕೃಷ್ಣ ಎಂಬವರು ದಾಖಲೆ ಸಮೇತ ರಾಜ್ಯಪಾಲರಿಗೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ.

ಫಲಾನುಭವಿಗಳ ಆಶ್ರಯ ಮನೆ ಹಂಚಿಕೆಯ ಭೂಸ್ವಾಧೀನ ಮಾಡಿಕೊಂಡು ಅಕ್ರಮವಾಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ Read More

ಬಿಜೆಪಿ, ಜೆಡಿಎಸ್ ಕನಸು ನನಸಾಗದು:ಲಕ್ಷ್ಮೀ ‌ಹೆಬ್ಬಾಳ್ಕರ್

ಮಂಡ್ಯ: ಬಿಜೆಪಿ, ಜೆಡಿಎಸ್ ಪಕ್ಷದವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ ಅದು ನನಸಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಾಂಗ್ ನೀಡಿದರು.

ಮಂಡ್ಯದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ,
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಕೊಡುಗೆ ಏನೇನೂ ಇಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ, ಜೆಡಿಎಸ್ ಕನಸು ನನಸಾಗದು:ಲಕ್ಷ್ಮೀ ‌ಹೆಬ್ಬಾಳ್ಕರ್ Read More

82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ:ಬಿಎಸ್ ವೈ ವಿರುದ್ಧ ಸಿಎಂ ಗರಂ

ಮೈಸೂರು: ಯಡಿಯೂರಪ್ಪನವರು ಕೋರ್ಟ್ ದಯದಿಂದ ಹೊರಗಡೆ ಇದ್ದಾರೆ,
ಈ ವಯಸ್ಸಿನಲ್ಲಿ ಫೋಕ್ಸೋ ಕೇಸ್ ಹಾಕಿಸಿಕೊಂಡಿದ್ದಾರೆ,82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ ಎಂದು ಸಿಎಂ ಸಿದ್ದರಾಮಯ್ಯ‌ ಟಾಂಗ್ ನೀಡಿದರು.

ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ಎಂಬ ಯಡಿಯೂರಪ್ಪ ಹೇಳಿಕೆಗೆ ಗರಂ ಆದರು.

82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ,
ಅವರು ರಾಜಕೀಯ ನಿವೃತ್ತಿ ಆಗಬೇಕಿತ್ತು, ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಅವರು ಚೆಕ್ ಮೂಲಕ ಹಣ ಪಡೆದಿದ್ದರು,ಡಿನೋಟಿಫಿಕೇಷನ್ ಮಾಡಿದ್ದರು,ಅವರ ಪ್ರಕರಣವೇ ಬೇರೆ ನನ್ನ ಪ್ರಕರಣವೇ ಬೇರೆ.
ನನ್ನ ಬಗ್ಗೆ ಮಾತನಾಡುವ ನೈತಿಕತೆ ಯಡಿಯೂರಪ್ಪ ಅವರಿಗಿಲ್ಲ ಎಂದು ತಿರುಗೇಟು ನೀಡಿದರು.

ಬಿಜೆಪಿ ಜೆಡಿಎಸ್ ನವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ,ನನ್ನ ಟಾರ್ಗೆಟ್ ಮಾಡಿ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ,ಇವರ ಸುಳ್ಳುಗಳಿಂದ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ,
ಇದರಲ್ಲಿ ಅವರು ಯಶಸ್ವಿಯಾಗುವುದಿಲ್ಲ‌ ಎಂದು ತಿರುಗೇಟು ನೀಡಿದರು.

82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ:ಬಿಎಸ್ ವೈ ವಿರುದ್ಧ ಸಿಎಂ ಗರಂ Read More

ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿದ್ದು ಅಸಮಾಧಾನ

ಬೆಂಗಳೂರು: ಬಿಜೆಪಿ- ಎನ್‌ಡಿಎ ಸರ್ಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮಾಜಿ ಮುಖ್ಯ ಮಂತ್ರಿ ಎಸ್‌. ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ನಂತರ ಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸಂಸತ್‌ನಲ್ಲಿ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದು, ಎನ್‌ಡಿಎ ಸರ್ಕಾರ ಜಾತ್ಯಾತೀತ ಸರ್ಕಾರ ಅಲ್ಲ, ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ, ಎನ್‌ಡಿಎ ಕೂಟ ಕಮ್ಯುನಲ್ ಪಾರ್ಟಿಗಳು, ಫ್ಯಾಸಿಸ್ಟ್ ಮನಸ್ಥಿತಿ ಇರೋರು ಎಂದು ಕಿಡಿ ಕಾರಿದರು.

ಆ.9ರಂದು ಮೈಸೂರಿನಲ್ಲಿ ಜನಾಂದೋಲನ ಸಮಾವೇಶ ನಡೆಯಲಿದೆ. ಅಲ್ಲಿ ಎಲ್ಲ ಮಾತಾಡ್ತೀನಿ ಎಂದು ‌ಸಿದ್ದು ಹೇಳಿದರು.

ಬಿ.ಕೆ ಹರಿಪ್ರಸಾದ್‌ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಹರಿಪ್ರಸಾದ್ ನಮ್ಮ ಪಕ್ಷದ ನಾಯಕರು. ಅವರು ನನ್ನ ಭೇಟಿಯಾಗೋದರಲ್ಲಿ ಯಾವುದೇ ವಿಶೇಷ ಇಲ್ಲ ಎಂದು ತಿಳಿಸಿದರು.

1 ಗಂಟೆಗಳ ಕಾಲ ಇದ್ದರು, ತುಂಬಾ ದಿನಗಳಿಂದ ಅವರು ಭೇಟಿಯಾಗಿರಲಿಲ್ಲ, ಹಾಗಾಗಿ ಭೇಟಿಯಾಗಿ ಮಾತಾಡಿದ್ದಾರೆ, ಉಭಯ ಕುಶಲೋಪರಿ ಅಷ್ಟೆ,ಬೇರೇನಿಲ್ಲಾ ಎಂದು ಸಿದ್ದರಾಮಯ್ಯ ತಿಳಿಸಿದರು.

ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿದ್ದು ಅಸಮಾಧಾನ Read More