ಚಾಮರಾಜನಗರ: ಚಾಮರಾಜನಗರ ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಪಾಪದ ಕೋಳಿಗಳು ಸುಟ್ಟು ಕರಕಲಾಗಿವೆ.
ಇದರಿಂದಾಗಿ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು ತಿಳಿಸಿದ್ದಾರೆ.
ದೇವರಾಜಪುರ ಗ್ರಾಮದ ಪ್ರದೀಪ್ ಕುಮಾರ್ ಅವರಿಗೆ ಸೇರಿದ ಕೋಳಿ ಫಾರಂನಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ.
ತಮ್ಮ ಜಮೀನಿನಲ್ಲಿ ಪ್ರದೀಪ್ ಕುಮಾರ್ ಎರಡು ಶೆಡ್ಗಳನ್ನು ನಿರ್ಮಿಸಿ ಸಾವಿರಾರು ಕೋಳಿಗಳನ್ನು ಸಾಕಾಣಿಕೆ ಮಾಡಿದ್ದರು.
ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಶೆಡ್ಗೆ ಬೆಂಕಿ ತಗುಲಿ ಶೆಡ್ ಸಂಪೂರ್ಣವಾಗಿ ನಾಶವಾಗಿದೆ.
ಸ್ಥಳಕ್ಕೆ ತಕ್ಷಣ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಈ ಸಂಬಂಧ ಚಾಮರಾಜನಗರ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
